November 1, 2010

ಕಾಣದ ಕಡಲಿಗೆ | ಜಿ. ಎಸ. ಶಿವರುದ್ರಪ್ಪ | My Fav











ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣಬಲ್ಲೆನೆ ಒಂದು ದಿನ ಕಡಲೊಳು
ಕೂಡಬಲ್ಲೆನೆ ಒಂದು ದಿನ || ಕಾ ||

ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ ಚಿತ್ರಿಸಿ ಚಿಂತಿಸಿ ಸುರಿಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ ಕಡಲನು ಕೂಡಬಲ್ಲೆನೆ ಒಂದು ದಿನ || ಕಾಣದ ||

ಸಾವಿರ ಹೊಳೆಗಳು ತುಂಬಿ ಹರಿದರೂ ಒಂದೇ ಸಮನಾಗಿಹುದಂತೆ
ಸುನಿಲ ವಿಸ್ತರ ತರಂಗ ಶೋಭಿತ ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ ಅಪಾರವಂತೆ
ಕಾಣಬಲ್ಲೆನೆ ಒಂದು ದಿನ ಅದರೊಳು ಕರಗಲಾರೆನೆ ಒಂದು ದಿನ || ಕಾಣದ ||

ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು
ಎಂದಿಗಾದರೂ ಕಾಣದ ಕಡಲಿಗೆ ಸೇರಬಲ್ಲೆನೇನು

ಸೇರಬಹುದೇ ನಾನು ಕಡಲ ನೀಲಿಯೊಳು ಕರಗಬಹುದೇ ನಾನು || ಕಾಣದ ||

3 comments:

  1. ತುಂಬಾ ಧನ್ಯವಾದಗಳು ರೇಖಾ. ಇದು ನನ್ನ ಮನಸನ್ನು ತುಂಬ ಆಳವಾಗಿ ಮುಟ್ಟಿದ ಹಾಡು. wordings ಗಾಗಿ ಥ್ಯಾಂಕ್ಸ್.

    ReplyDelete
  2. Thanks for the comment :),C Ashwath has sung too good!!

    ReplyDelete